ಬೆಂಗಳೂರು (ಫೆ.21): ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ (Muder Case) ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. 9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನ ಇಂದು ಕೋರ್ಟ್ಗೆ (Court) ಹಾಜರು ಪಡಿಸಲಾಗಿತ್ತು.
ಜಡ್ಜ್ ಮುಂದೆ ಬೈರತಿ ಹಾಜರು
ಮುಖಕ್ಕೆ ಮಾಸ್ಕ್ ಧರಿಸಿ ಜಡ್ಜ್ ಮುಂದೆ ಆರೋಪಿ ಬೈರತಿ ಬಸವರಾಜು ಹಾಜರಾಗಿದ್ರು. ವಿಚಾರಣೆ ಆರಂಭವಾಗ್ತಿದ್ದಂತೆ ಮತ್ತೆ ಸಿಐಡಿ ಕಸ್ಟಡಿಗೆ ಅಧಿಕಾರಿಗಳು ಮನವಿ ಮಾಡಿದ್ರು. ಇನ್ನೂ ತನಿಖೆಗೆ ಸಂಪೂರ್ಣ ಸಹಕಾರ ನೀಡಿಲ್ಲ. ಇನ್ನಷ್ಟು ತನಿಖೆ ಅಗತ್ಯ ಇದೆ ಎಂದು ವಕೀಲರು ವಾದ ಮಂಡಿಸಿದ್ರು. ಬಳಿಕ ಆರೋಪಿ ಪರ ವಕೀಲರು ಕೂಡ ಪ್ರತಿವಾದ ಮಾಡಿದ್ರು, ಈಗಾಗಲೇ 9 ದಿನಗಳು ಕಸ್ಟಡಿಗೆ ನೀಡಲಾಗಿದೆ. ವೈದ್ಯಕೀಯ ವರದಿ ಆಧರಿಸಿ ಕಸ್ಟಡಿಗೆ ನೀಡಬಾರದು ಎಂದ್ರು.

0 Comments
Await For Moderation ; Normally we don't allow Comments